ಟೀ ಕುಡಿಯುತ್ತಿದ್ದ ವಿಶ್ವ ಯಾನೆ ಮುದ್ದೆ ಮೇಲೆ ಮಾರಣಾಂತಿಕ ಹಲ್ಲೆ.!!
ಭದ್ರಾವತಿ : ನಗರದ ಅನ್ವರ್ ಕಾಲೋನಿಯಲ್ಲಿರುವ ಬೇಕರಿಯೊಂದರಲ್ಲಿ ಟೀ ಕುಡಿಯಲು ಬಂದಿದ್ದ ವಿಶ್ವ ಯಾನೆ ಮುದ್ದೆ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹಳೆಯ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಅನ್ವರ್ ಕಾಲೋನಿಯ ಬೇಕರಿಯಲ್ಲಿ ಟೀ ಕುಡಿಯುತ್ತಿದ್ದ ವೇಳೆ ವಿಶ್ವ ಮೇಲೆ ಏಕಾಏಕಿ ಹಲ್ಲೆ ನಡೆದಿದೆ. ಹಲ್ಲೆ ನಡೆಸಿದವರು ಯಾರು ಎಂಬುದು ಸ್ಪಷ್ಟವಾಗಿಲ್ಲದಿದ್ದರೂ, ಆತನ ಹಳೆಯ ವೈಷಮ್ಯ ಹೊಂದಿದ್ದವರೇ ಈ ಕೃತ್ಯ ಎಸಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಹಲ್ಲೆಯ ತೀವ್ರತೆಗೆ ವಿಶ್ವನನ್ನು ಬೇಕರಿಯ ಫ್ರಿಡ್ಜ್ ಅಡಿ ಬೀಳುವಂತೆ ಹೊಡೆದಿದ್ದು, ಆತ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಸಿಬ್ಬಂದಿ ಗಾಯಾಳುವನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದು, ಹಲ್ಲೆಯ ಹಿಂದಿನ ನಿಖರ ಕಾರಣ ಹಾಗೂ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಸ್ಥಳೀಯ ಮಾಹಿತಿ ಪ್ರಕಾರ 6 -7 ಜನರ ಗುಂಪು ದಾಳಿ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎನ್ನಲಾಗುತ್ತಿದೆ.
Tags:
ಕ್ರೈಂ ಸುದ್ದಿ