ಶಿವಮೊಗ್ಗದಲ್ಲಿ ರೌಡಿಶೀಟರ್ ಬರ್ಬರ ಹ*ತ್ಯೆ - ಹಳೆ ದ್ವೇಷದ ಶಂಕೆ..!
ಶಿವಮೊಗ್ಗ: ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ನಡೆದಿದೆ..
ನಗರದ ಗೋವಿಂದಾಪುರ ಆಶ್ರಯ ಬಡಾವಣೆ ನಿವಾಸಿಯಾದ ನರಸಿಂಹನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮನೆಯೊಂದರ ಓಣಿ ಒಳಗೆ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ನರಸಿಂಹನ ಮೇಲೆ ಮನಸೋಯಿಚ್ಛೆ ದಾಳಿ ನಡೆಸಿದ್ದು ಆತನ ತಲೆ ಹಾಗೂ ಕೈ ಭಾಗಕ್ಕೆ ದಾಳಿ ಮಾಡಲಾಗಿದೆ. ನರಸಿಂಹನ ಕೈಗಳು ತುಂಡಾಗಿದ್ದು, ಮುಖ ಗುರುತು ಸಿಗದಂತಾಗಿದೆ. ಘಟನೆಯಲ್ಲಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಹಾಗೂ ಕೋಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.: ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ನಡೆದಿದೆ..
ನಗರದ ಗೋವಿಂದಾಪುರ ಆಶ್ರಯ ಬಡಾವಣೆ ನಿವಾಸಿಯಾದ ನರಸಿಂಹನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮನೆಯೊಂದರ ಓಣಿ ಒಳಗೆ ಆತನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ನರಸಿಂಹನ ಮೇಲೆ ಮನಸೋಯಿಚ್ಛೆ ದಾಳಿ ನಡೆಸಿದ್ದು ಆತನ ತಲೆ ಹಾಗೂ ಕೈ ಭಾಗಕ್ಕೆ ದಾಳಿ ಮಾಡಲಾಗಿದೆ. ನರಸಿಂಹನ ಕೈಗಳು ತುಂಡಾಗಿದ್ದು, ಮುಖ ಗುರುತು ಸಿಗದಂತಾಗಿದೆ. ಘಟನೆಯಲ್ಲಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಹಾಗೂ ಕೋಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Tags:
ಕ್ರೈಂ ಸುದ್ದಿ