ಸರ್ಕಾರಿ ಶಾಲೆಯಲ್ಲಿ ಅತೀ ಹೆಚ್ಚು ಶುಲ್ಕ ಪಡೆಯುತ್ತಿರುವ ಬಗ್ಗೆ ಡಿಡಿಪಿಐ ಗೆ ದೂರು..! DDPI

ಸರ್ಕಾರಿ ಶಾಲೆಯಲ್ಲಿ ಅತೀ ಹೆಚ್ಚು ಶುಲ್ಕ ಪಡೆಯುತ್ತಿರುವ ಬಗ್ಗೆ ಡಿಡಿಪಿಐ ಗೆ ದೂರು..!

ತೀರ್ಥಹಳ್ಳಿ : ಸರ್ಕಾರಿ ಶಾಲೆಯಲ್ಲಿ ಸರ್ಕಾರಿ ಆದೇಶಕ್ಕೂ ಮೇಲಾಗಿ ಹೆಚ್ಚು ಶುಲ್ಕ ಪಡೆಯುತ್ತಿರುವ ಬಗ್ಗೆ ಈಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ದೂರು ನೀಡಲಾಗಿದ್ದು ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪ್ರತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ..

ಸರ್ಕಾರಿ ಶಾಲೆಯಲ್ಲಿ 180 ರೂ ಶುಲ್ಕ ಇದ್ದು ಶಾಲೆಯಲ್ಲಿ ಅದಕ್ಕೆ ಇನ್ನೊಂದು ಸೊನ್ನೆ ಸೇರಿಸಿ 1800 ರೂ ಹಾಗೂ ಕೆಲವು ಶಾಲೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ಹಣವನ್ನು ಪಡೆಯುತ್ತಿದ್ದು ಎಸ್ ಡಿ ಎಂ ಸಿಯವರು ಈ ಹಣ ಪಡೆಯುತ್ತಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ.. ಈಗಾಗಲೇ ಪೋಷಕರೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ದೂರು ನೀಡಿದ್ದು ಈ ವಿಚಾರ ಈಗ ಭಾರಿ ಚರ್ಚೆಯಾಗುತ್ತಿದೆ..

ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿ ಶಾಲೆಗೂ ಭೇಟಿ ನೀಡುತ್ತಾರ ? ಅತೀ ಹೆಚ್ಚು ಶುಲ್ಕ ಪಡೆಯುತ್ತಿರುವ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುತ್ತಾರ ? ಅಥವಾ ಎಲ್ಲಾ ಅಧಿಕಾರಿಗಳು ಸರ್ಕಾರದ ಆದೇಶಕ್ಕೆ ಬೆಲೆ ಕೊಡದೇ ಸುಮ್ಮನಾಗುತ್ತಾರ? ಕಾದು ನೋಡಬೇಕಿದೆ..
Previous Post Next Post