ಬಾಳೆಬರೇ ಘಾಟಿಯಲ್ಲಿ ಖಾಸಗಿ ಬಸ್‌ಗೆ ಆಕಸ್ಮಿಕ ಬೆಂಕಿ
ಹೊಸನಗರ : ಹೊಸನಗರದ ಬಾಳೆಬರೇ ಘಾಟಿಯಲ್ಲಿ ಇಂದು ಖಾಸಗಿ ಬಸ್ ಆದ ಶ್ರೀ ದುರ್ಗಾಂಬ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದೆ. ಈ ಬಸ್ ಕುಂದಾಪುರದ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ.
ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಹೊರಬಂದಿದ್ದು, ಯಾರಿಗೂ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
Tags:
ಹೊಸನಗರ ಸುದ್ದಿ