ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಜಿಲ್ಲಾಧಿಕಾರಿಗಳು Hulikal Ghat

ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಜಿಲ್ಲಾಧಿಕಾರಿಗಳು 

ಹೊಸನಗರ :  ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯ ಹೇರ್‌ಪಿನ್‌ನಲ್ಲಿ ದಿನಾಂಕ:09/04/2026 ರಂದು ಕಾಮಗಾರಿಯ ತಳಪಾಯದ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದಲ್ಲಿ ಹಾಲಿ ಇರುವ ಕಾಂಕ್ರೀಟ್ ರಸ್ತೆಯ
ಕೆಳಭಾಗದಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂಕುಸಿತ ಉಂಟಾಗಿ ಕಾಂಕ್ರೀಟ್ ರಸ್ತೆಯ ಮೇಲ್ಮಣ್ಣಲ್ಲಿ  ಬಿರುಕುಗಳು ಕಂಡುಬಂದಿದ್ದು, ಸುರಕ್ಷತಾ ದೃಷ್ಟಿಯಿಂದ ರಸ್ತೆಯು ವಾಹನಗಳ ಸಂಚಾರಕ್ಕೆ ಸೂಕ್ತವಾಗಿರುವುದಿವೆಂದು ಉಲ್ಲೇಖ (1) ರ ಅಧಿಸೂಚನೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ (ಮಾಸ್ತಿಕಟ್ಟೆಯಿಂದ ಹೊಸಅಂಗಡಿಯವರೆಗೆ)
ತಾತ್ಕಾಲಿಕವಾಗಿ ಪ್ರಸ್ತುತ ಕೈಗೊಳ್ಳುತ್ತಿರುವ ರಕ್ಷಣಾತ್ಮಕ ಕಾಮಗಾರಿಯು ಪೂರ್ಣಗೊಳ್ಳುವ ವರೆಗೆ ರಸ್ತೆಯಲ್ಲಿ ಎಲ್ಲಾ
ಮಾದರಿಯ ವಾಹನಗಳನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ಸಂಚಾರಿಸಲು ಆದೇಶಿಸಿಲಾಗಿತ್ತು.. ಹಾಗೂ ಉಲ್ಲೇಖ (2) ರ ಅಧಿಸೂಚನೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬಾಳಬಾರ (ಹುಲಿಕಲ್ ಘಾಟ್) ವ್ಯಾಪ್ತಿಯ ಚಂಡಿಕಾಂಬ ದೇವಸ್ಥಾನದ ಬಳಿಯಲ್ಲಿರುವ ಮೆಟ್ಟಿಲುಗಳನ್ನು ಬಳಸಿಕೊಂಡು ವಾಹನಗಳ ಅದಲು ಬದಲು ಮೂಲಕ ಸಂಚಾರಕ್ಕೆ ಅನುವು ಮಾಡಲಾಗಿತ್ತು.


ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ - 52 ರ ಹುಲಿಕಲ್ ಘಾಟ್ ವ್ಯಾಪ್ತಿಯ ಹೇರ್ ಪಿನ್ ತಿರುವಿನ ಭಾಗಷಃ ಉದ್ದದಲ್ಲಿ ತಡೆಗೋಡೆಯನ್ನು ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯೊಂದಿಗೆ ನಿರ್ಮಿಸಲಾಗಿರುತ್ತದೆ ಹಾಗೂ ರಸ್ತೆಯ ಭಾಗದಲ್ಲಿ ಲೀನ್ ಕಾಂಕ್ರೀಟ್ ಹಾಕಲಾಗಿದ್ದು, ಪ್ರಸ್ತುತ ಸದರಿ ರಸ್ತೆಯಲ್ಲಿ
ಪ್ರಯಾಣಿಕರ ಸಂಚಾರಕ್ಕೆ ಅನುವಾಗುವಂತೆ ಬಸ್ ಸೇರಿದಂತೆ ಇತರ ಪ್ರಯಾಣಿಕರು ಸಂಚರಿಸುವ ವಾಹನಗಳು ಹಾಗೂ ಲಘು ಗೂಡ್ಸ್ ವಾಹನಗಳು ಸಂಚರಿಸಬಹುದಾಗಿ ಅಭಿಪ್ರಾಯಿಸಿ ಉಲ್ಲೇಖ (1) ರ ಅಧಿಸೂಚನೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಿರುವುದನ್ನು ಮೇಲ್ಕಂಡ ವಾಹನಗಳ ಸಂಚಾರಕ್ಕೆ ಅನುವಾಗುವಂತೆ  ಸೂಕ್ತ ಮಾರ್ಪಾಡು ಮಾಡುವ ಸಂಬಂಧ ಕಾರ್ಯಪಾಲಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಶಿವಮೊಗ್ಗ ವಿಭಾಗ,ಶಿವಮೊಗ್ಗ ರವರು ಉಲ್ಲೇಖ (3) ರಂತೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಸದರಿ ಪ್ರಸ್ತಾವನೆಯಂತೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಮತ್ತು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಸಾಗರ,ಶಿವಮೊಗ್ಗ ಜಿಲ್ಲೆ ಇವರ ಉಲ್ಲೇಖ (4) ಮತ್ತು (5) ರಂತೆ ವರದಿಗಳನ್ನು ಪಡೆಯಲಾಗಿರುತ್ತದೆ. ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ ನಲ್ಲಿ ಮತ್ತೆ ಭೂಕುಸಿತವಾಗುವ ಸಂಭವವಿರುವುದರಿಂದ ಘಾಟಿಯಲ್ಲಿ ಸಂಚರಿಸುವ ಪ್ರಯಾಣಿಕರ ಸುರಕ್ಷತೆಗಾಗಿ ತಡೆಗೋಡೆ, ಎಚ್ಚರಿಕೆ ಫಲಕಗಳು, ಮಾಹಿತಿ/ಸೂಚನಾ ಫಲಕಗಳು ಮತ್ತು ಕ್ಯಾಟ್ ಐಸ್ ಹಾಗೂ ಸೋಲಾರ್ ಸ್ಟಡ್ಸ್ ಅಳವಡಿಕೆ ಮುಂತಾದ ಮೂಲಭೂತವಾದ ಎಲ್ಲಾ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಂಡು ನಂತರ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬಹುದಾಗಿ
ವರದಿ ಸಲ್ಲಿಸಿರುತ್ತಾರೆ.

ಮೇಲ್ಕಂಡ ಉಲ್ಲೇಖಗಳನ್ನು ಪರಿಶೀಲಿಸಿ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮೋಟಾರು ವಾಹನ ಕಾಯ್ದೆ 1988 ಕಲಂ 115 ಹಾಗೂ 116 ರನ್ವಯ ವಾಹನಗಳ ಸಂಚಾರವನ್ನು ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿ, ದಿನಾಂಕ:12.06.2026 ರಿಂದ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ಮೂಲಕ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಆದೇಶಿಸಲಾಗಿದೆ..
Previous Post Next Post