ಗಿಡ ನೆಟ್ಟು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದ ಸೀಬಿನಕೆರೆ ಶಾಲೆ ವಿದ್ಯಾರ್ಥಿಗಳು
ತೀರ್ಥಹಳ್ಳಿ : ಪಟ್ಟಣದ ಸೀಬಿನಕೆರೆಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಗಿಡವನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು..
ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಟ್ಟು, ಅವುಗಳ ಪೋಷಣೆಯ ಬಗ್ಗೆ ಪ್ರತಿಜ್ಞೆ ಮಾಡಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ತಿಳಿಸಿದ ಮುಖ್ಯೋಪಾಧ್ಯಾಯರಾದ ಮಾತನಾಡಿ ಸಾವಿತ್ರಿ
ಜಗತ್ತಿಗೆ ಪುನರುಜ್ಜೀವನದ ಅವಕಾಶ ಸಿಗಲಿ ಎಂಬ ಆಶಯದೊಂದಿಗೆ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಮರಗಳನ್ನು ಬೆಳೆಸುವುದು, ನಗರಗಳನ್ನು ಹಸಿರೀಕರಣಗೊಳಿಸುವುದು, ನಮ್ಮೆಲ್ಲರ ಆದ್ಯ ಕರ್ತವ್ಯ. ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಆಗಿರುತ್ತದೆ. ನೀವು ಶಾಲೆಯ ಆವರಣದಲ್ಲಿ ನೆಟ್ಟಿರುವ ಸಸಿಗಳನ್ನು ಪ್ರತಿನಿತ್ಯ ನೀರನ್ನು ಹಾಕಿ ಪೋಷಣೆ ಮಾಡಬೇಕು. ಹಾಗೆ ಅದನ್ನು ಸಂರಕ್ಷಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಜೇಶ್, ಶಿಕ್ಷಕರು, ವಿದ್ಯಾರ್ಥಿಗಳು ಭಾಗಿಯಾಗಿದ್ದರು..
Tags:
ತೀರ್ಥಹಳ್ಳಿ ಸುದ್ದಿ