ರಾಜ್ಯಮಟ್ಟದಲ್ಲಿ ಬೆಳ್ಳಿ ಪದಕ ಗೆದ್ದ ವಾಗ್ದೇವಿ ಶಾಲೆಯ ಮಿಥಾಲಿ
ತೀರ್ಥಹಳ್ಳಿ : ಜೂನ್ 5 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 16 ವರ್ಷ ವಯೋಮಿತಿಯೊಳಗಿನ ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ 2026 ರಲ್ಲಿ
ತೀರ್ಥಹಳ್ಳಿಯ ವಾಗ್ದೇವಿ ಆಂಗ್ಲಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮಿಥಾಲಿ ಭಾಗವಹಿಸಿ ಅತ್ಯುತ್ತಮವಾಗಿ ಆಟವನ್ನು ಪ್ರದರ್ಶಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿಯ ಪದಕವನ್ನು ಪಡೆದಿರುತ್ತಾಳೆ.
ಇವಳು ತಗಡವಳ್ಳಿಯ ಗೀತಾ ಹಾಗು ಶಶಿನಾಥ ದಂಪತಿಗಳ ಪುತ್ರಿಯಾಗಿದ್ದು ಶಾಲೆಗೆ, ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿಯನ್ನು ತಂದಿರುವ ಇವಳ ಸಾಧನೆಯನ್ನು ವಾಗ್ದೇವಿ ಆಂಗ್ಲಮಾಧ್ಯಮ ಶಾಲೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕವೃಂದ ಹಾಗೂ ಪೋಷಕರು ಅಭಿನಂದಿಸಿದ್ದಾರೆ.
Tags:
ವಾಗ್ದೇವಿ ಸಂಸ್ಥೆ