ಆಗುಂಬೆ ಸುರಂಗ ಮಾರ್ಗ ನಿರ್ಮಾಣವು ಪರಿಸರ ಸ್ನೇಹಿ ಹಾಗೂ ಶಾಶ್ವತ ಪರಿಹಾರ - ಬಿ ವೈ ರಾಘವೇಂದ್ರ
ಶಿವಮೊಗ್ಗ : ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ಕುರಿತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತದೊಂದಿಗೆ ಸುದೀರ್ಘ ಸಭೆ ನಡೆಸಲಾಗಿದೆ. ಪ್ರಸ್ತುತ ರಸ್ತೆ ವಿಸ್ತರಣೆಗೆ ಸುಮಾರು ₹420 ಕೋಟಿ ಮಂಜೂರಾಗಿದ್ದು, ಅರಣ್ಯ ಇಲಾಖೆಯ ಅನುಮತಿ ದೊರೆತ ಕೂಡಲೇ ಕಾಮಗಾರಿ ವೇಗ ಪಡೆಯಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು..
ಭೂಕುಸಿತ ಸಮಸ್ಯೆ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಗುಡ್ಡಗಳನ್ನು ಕತ್ತರಿಸಿ ರಸ್ತೆ ನಿರ್ಮಿಸುವುದಕ್ಕಿಂತ ಸುರಂಗ ಮಾರ್ಗ ನಿರ್ಮಾಣವು ಪರಿಸರ ಸ್ನೇಹಿ ಹಾಗೂ ಶಾಶ್ವತ ಪರಿಹಾರ ಎಂದು ಅಭಿಪ್ರಾಯಪಟ್ಟರು. ಸುರಂಗ ನಿರ್ಮಾಣದಿಂದ ಪ್ರಕೃತಿ ಸಂರಕ್ಷಣೆ ಸಾಧ್ಯವಾಗುವುದರ ಜೊತೆಗೆ ವಾಹನ ಸಂಚಾರವೂ ಸುರಕ್ಷಿತವಾಗಲಿದೆ. ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿ ಎರಡನ್ನೂ ಸಮತೋಲನದಲ್ಲಿ ಇಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು .
ಇದರ ಜೊತೆಗೆ ಸುರಂಗ ಮಾರ್ಗ ನಿರ್ಮಾಣದ ಸಾಧ್ಯತೆಗಳ ಕುರಿತೂ ತಾಂತ್ರಿಕ ಅಧ್ಯಯನ ನಡೆಯುತ್ತಿದೆ ಎಂದು ತಿಳಿಸಿದರು