ಕೊಡಚಾದ್ರಿ ಪ್ರವಾಸದ ವೇಳೆ ಯುವಕನಿಗೆ ಹೃದಯಾಘಾತ: ಬೆಂಗಳೂರು ಮೂಲದ ಶ್ರೀಕಾಂತ್ ಸಾವು!
ಹೊಸನಗರ : ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ಪ್ರವಾಸಿಗನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ 28 ವರ್ಷದ ಶ್ರೀಕಾಂತ್ ಎಂದು ಗುರುತಿಸಲಾಗಿದ್ದು ಸ್ನೇಹಿತರೊಂದಿಗೆ ಕೊಡಚಾದ್ರಿ ಗಿರಿಶಿಖರ ವೀಕ್ಷಣೆಗೆ ಶುಕ್ರವಾರ ಆಗಮಿಸಿದ್ದು, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆ ಗ್ರಾಮದ ತಮ್ಮ ಸ್ನೇಹಿತರ ಮನೆಯಲ್ಲಿ ತಂಗಿದ್ದರು.
ಶ್ರೀಕಾಂತ್ ಅವರಿಗೆ ಈ ಸಂದರ್ಭದಲ್ಲಿ ಏಕಾಏಕಿ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ದರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಹೊಸನಗರ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಕುಟುಂಬಸ್ಥರು ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..
Tags:
ಹೊಸನಗರ ಸುದ್ದಿ