ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ - ಚಾಲಕನಿಗೆ ಗಾಯ Tth

ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ - ಚಾಲಕನಿಗೆ ಗಾಯ 

ತೀರ್ಥಹಳ್ಳಿ : ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೆ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದು ಚಾಲಕನಿಗೆ ಗಂಭೀರ ಗಾಯವಾದ ಘಟನೆ ಶಿವರಾಜಪುರ ಬಳಿ ನಡೆದಿದೆ..

ತೀರ್ಥಹಳ್ಳಿಯವರದ್ದೇ ಆದ ಗೂಡ್ಸ್ ಬಾಡಿಗೆಗಾಗಿ ಹೋಗಿತ್ತು. ಆಗುಂಬೆ ಕಡೆಯಿಂದ ವಾಪಾಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.  ಗೂಡ್ಸ್ ವಾಹನದ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಚಾಲಕನಿಗೆ ಕಾಲಿಗೆ ಗಂಭೀರವಾದ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ..

Previous Post Next Post