ಆಗುಂಬೆ ಪೊಲೀಸ್ ಠಾಣೆಯ ಸಿಬ್ಬಂದಿ ಶಿವಣ್ಣ ನಿಧನ Agumbe

ಆಗುಂಬೆ ಪೊಲೀಸ್ ಠಾಣೆಯ ಸಿಬ್ಬಂದಿ ಶಿವಣ್ಣ ನಿಧನ

ತೀರ್ಥಹಳ್ಳಿ : ಆಗುಂಬೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಣ್ಣ (52 ವರ್ಷ ) ಹೃದಯಾಘಾತದಿಂದ ಮೃತಪಟ್ಟಿದ್ದಾರೆ..

ಮೂಲತಃ ಭದ್ರಾವತಿ ತಾಲೂಕಿನ ಆನವೇರಿ ಗ್ರಾಮದ ಶಿವಣ್ಣ ಆಗುಂಬೆ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ಎದೆ ನೋವು ಕಂಡು ಬಂದಿದ್ದು ಕೊಡಲೇ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ..

ಶಿವಣ್ಣನವರು ಪತ್ನಿ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.. ಶಿವಣ್ಣ ಅವರ ನಿಧನಕ್ಕೆ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವನಗೌಡ ಹಾಗೂ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ..
Previous Post Next Post