ಕುಸ್ತಿ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ಸಂಸ್ಥೆಯ ಆರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ Christ king

ಕುಸ್ತಿ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ಸಂಸ್ಥೆಯ ಆರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಎಸ್.ವಿ.ಟಿ ಪ್ರೌಢಶಾಲೆ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕಿಯರ ವಿಭಾಗದ ಹಾಗೂ ಬಾಲಕರ ವಿಭಾಗದಲ್ಲಿ ಒಟ್ಟು ಆರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
 
ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಒಂಬತ್ತನೇ ತರಗತಿಯ ಸಾತ್ವಿಕ್ ಮತ್ತು ಬಾಲಕಿಯರ ವಿಭಾಗದಲ್ಲಿ ಹತ್ತನೇ ತರಗತಿಯ ಸಾನ್ವಿ ಎಂ ನಾಯಕ್, ರಿತು ಫ್ರಾನ್ಸಿಸ್ ಹಾಗೂ ಪ್ರಾಥಮಿಕ ವಿಭಾಗದಲ್ಲಿ ಎಂಟನೇ ತರಗತಿಯ ಮಹಮ್ಮದ್ ಅಫ್ರಾಜ್, ಸಾದ್ವಿ ಎಂ ನಾಯಕ್, ಏಳನೇ ತರಗತಿಯ ಆರ್ಯನ್ ಎಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ಉಳಿದಂತೆ ಒಂಬತ್ತನೇ ತರಗತಿಯ ವಂದಿತ್, ಧ್ರುವಿತ್, ಸಿದ್ದಾರ್ಥ್, ಎಂಟನೇ ತರಗತಿಯ ಅಯಾನ್ ಮತ್ತು ಏಳನೇ ತರಗತಿಯ ಅಮನ್ ದ್ವಿತೀಯ ಸ್ಥಾನ ಹಾಗೂ ಎಂಟನೇ ತರಗತಿಯ ಶಿಫಾನ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

Previous Post Next Post