ಹೊಸನಗರದ ಶಿಕ್ಷಕಿಗೆ ರಾಷ್ಟ್ರ ಪ್ರಶಸ್ತಿ ಗೌರವ
ಹೊಸನಗರ : ನಿಸ್ವಾರ್ಥ ಸೇವೆ ಮೂಲಕ ಗ್ರಾಮೀಣ ಭಾಗದ ಮಕ್ಕಳ ಬಾಳಿಗೆ ಬೆಳಕಾಗಿರುವ ಹೊಸನಗರ ತಾಲೂಕಿನ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರತ್ನ ಕುಮಾರಿ ಅವರು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ..
ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದು, ದೇಶದಾದ್ಯಂತ ಆಯ್ಕೆಯಾದ 48 ಅತ್ಯುತ್ತಮ ಶಿಕ್ಷಕರಲ್ಲಿ ರತ್ನ ಕುಮಾರಿ ಕೂಡ ಒಬ್ಬರಾಗಿದ್ದಾರೆ.. ಶಿಕ್ಷಕಿ ರತ್ನಕುಮಾರಿಯವರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಭಿನಂದನೆಗಳನ್ನು ತಿಳಿಸಿದ್ದಾರೆ..
ಗ್ರಾಮೀಣ ಭಾಗದ ಶಿಕ್ಷಕಿಗೆ ಈ ಗೌರವ ಸಿಕ್ಕಿರುವುದು ಜಿಲ್ಲೆ, ರಾಜ್ಯಕ್ಕೆ ಹೆಮ್ಮೆ ಎಂಬುದಾಗಿ ಮಧು ಬಂಗಾರಪ್ಪ ತಿಳಿಸಿದ್ದಾರೆ..
Tags:
ಹೊಸನಗರ ಸುದ್ದಿ