ಕಸ್ತೂರಿ ರಂಗನ್ ವರದಿ ವಿರೋಧಿಸಿ ಆರ್ ಎಂ ಮಂಜುನಾಥ್ ಗೌಡ ನೇತೃತ್ವದಲ್ಲಿ ಪಾದಯಾತ್ರೆಗೆ ಚಾಲನೆ..!
ಹೊಸನಗರ: ಕಸ್ತೂರಿ ರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಆರ್ ಎಂ ಮಂಜುನಾಥ್ ಗೌಡ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ..
ಕಾರಣಗಿರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಆರ್ ಎಂ ಮಂಜುನಾಥ್ ಗೌಡ ಹಾಗೂ ಬೇಳೂರು ಗೋಪಾಲಕೃಷ್ಣ
ಎತ್ತಿನಗಾಡಿಯ ಮೇಲೆ ನಿಂತು ಕಸ್ತೂರಿರಂಗನ್ ವರದಿ ವಿರೋಧಿ ಪೋಸ್ಟರ್ ಪ್ರದರ್ಶಿಸಿ ಪಾದಯಾತ್ರೆಗೆ ಚಾಲನೆ ನೀಡಿದರು.
ಪಾದಯಾತ್ರೆಯಲ್ಲಿ ರೈತರು, ಕೃಷಿ ಕಾರ್ಮಿಕರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದಾರೆ. ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯಿಂದ ಮಲೆನಾಡಿನ ರೈತರು ಹಾಗೂ ಗ್ರಾಮೀಣ ಜನರ ಬದುಕಿನ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ. ಹೊಸನಗರದವರೆಗೂ ಪಾದಯಾತ್ರೆ ನಡೆಯಲಿದ್ದು ಆ ನಂತರ ಹೊಸನಗರದಲ್ಲಿ ಬಹಿರಂಗ ಸಭೆ ಏರ್ಪಡಿಸಲಾಗಿದೆ.
Tags:
ಹೊಸನಗರ ಸುದ್ದಿ