ಜೂನಿಯರ್ ಅಥ್ಲೆಟಿಕ್ ನಲ್ಲಿ ಬೆಳ್ಳಿ ಪದಕ ಪಡೆದ ವಾಗ್ದೇವಿ ಸಂಸ್ಥೆಯ ಮಿತಾಲಿ
ತೀರ್ಥಹಳ್ಳಿ : ಆಗಸ್ಟ್ 11 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 18 ವರ್ಷ ವಯೋಮಿತಿ ಒಳಗಿನ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ 2026 ಇದರಲ್ಲಿ ಗುಂಡು ಎಸೆತ ಸ್ಪರ್ಧೆಯಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮಿತಾಲಿ ಟಿಎಸ್ ಭಾಗವಹಿಸಿ ಅತ್ಯುತ್ತಮ ಪ್ರದರ್ಶನವನ್ನು ನೀಡಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿರುತ್ತಾಳೆ.
ಇವಳು ತಗಡವಳ್ಳಿಯ ಗೀತಾ ಹಾಗೂ ಶಶಿನಾಥ ದಂಪತಿಗಳ ಪುತ್ರಿಯಾಗಿದ್ದಾಳೆ. ಇವಳ ಈ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದಿಸಿರುತ್ತಾರೆ.
Tags:
ವಾಗ್ದೇವಿ ಸಂಸ್ಥೆ