ಶಿವಮೊಗ್ಗದಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ನೇ*ಣಿ*ಗೆ ಶರಣು..!
ಶಿವಮೊಗ್ಗ : ತಂದೆ ತಾಯಿ ರಾಘವೇಂದ್ರ ಮಠಕ್ಕೆ ಹೋದ ಸಂದರ್ಭದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ..
ಮೃತಪಟ್ಟ ವಿದ್ಯಾರ್ಥಿನಿಯನ್ನು ಸೃಷ್ಟಿ ಎಂದು ಗುರುತಿಸಲಾಗಿದೆ.. ಈಕೆ ನಗರದ ರಾಮಕೃಷ್ಣ ಶಾಲೆಯಲ್ಲಿ 9 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು..ರಾಯರ ಆರಾಧನೆ ಹಿನ್ನಲೆಯಲ್ಲಿ ರಾಘವೇಂದ್ರ ಸ್ವಾಮಿ ಮಠಕ್ಕೆ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದೆ. ಸೃಷ್ಟಿಯನ್ನು ಮಾತ್ರ ಮನೆಯಲ್ಲಿ ಬಿಟ್ಟು ಹೋಗಲಾಗಿತ್ತು ಈ ವೇಳೆ ಈ ದುರ್ಘಟನೆ ನಡೆದಿದೆ .
ಯಾವ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ನಿಖರ ಕಾರಣ ತಿಳಿದು ಬಂದಿಲ್ಲ.. ಈ ವಿದ್ಯಾರ್ಥಿನಿಯ ಸಾವಿನ ಹಿನ್ನೆಲೆಯಲ್ಲಿ ತುಂಗನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
Tags:
ಆತ್ಮಹತ್ಯೆ ಸುದ್ದಿ