ನಾಳೆ ತೀರ್ಥಹಳ್ಳಿಯ ವಾಗ್ದೇವಿ ಹಾಗೂ ಸಹ್ಯಾದ್ರಿ ಸಂಸ್ಥೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ತೀರ್ಥಹಳ್ಳಿ : ಕಸ್ತೂರಿ ರಂಗನ್ ವರದಿ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಗಳಾದ ವಾಗ್ದೇವಿ ಹಾಗೂ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವುದಾಗಿ ಆಡಳಿತ ಮಂಡಳಿಗಳು ತಿಳಿಸಿವೆ..
ನಾಳೆ ಬೆಳಗ್ಗೆ 10 ಗಂಟೆಗೆ ಸರಿಯಾಗಿ ತೀರ್ಥಹಳ್ಳಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆಗಮಿಸಲಿದ್ದು ಈ ವೇಳೆ ಪಟ್ಟಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಗಳು ಹೆಚ್ಚಿದ್ದು ಮಕ್ಕಳಿಗೆ ಇದರಿಂದ ಸಮಸ್ಯೆ ಆಗಬಾರದೆಂಬ ಕಾರಣದಿಂದಾಗಿ ವಾಗ್ದೇವಿ ಮತ್ತು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ..
Tags:
ತೀರ್ಥಹಳ್ಳಿ ಸುದ್ದಿ