ಆಕಾಶವಾಣಿ ಭದ್ರಾವತಿ-ಶಿವಮೊಗ್ಗ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾಗಿ ನಂದನ್ ಕುಮಾರ್ ಎಲ್.ಓ. ಅಧಿಕಾರ ಸ್ವೀಕಾರ
ಶಿವಮೊಗ್ಗ : ಆಕಾಶವಾಣಿ,ಭದ್ರಾವತಿ-ಶಿವಮೊಗ್ಗ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾಗಿ ನಂದನ್ ಕುಮಾರ್ ಎಲ್.ಓ. ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ನಂದನ್ ಕುಮಾರ್ ಎಲ್.ಓ. ಅವರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ವಿಭಾಗದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದು, ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಹಿಂದೆ ಅವರು ಆಕಾಶವಾಣಿ ಬೆಂಗಳೂರು ಕೇಂದ್ರದಲ್ಲಿ ಕಾರ್ಯಕ್ರಮ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಭದ್ರಾವತಿ ಆಕಾಶವಾಣಿ ಕೇಂದ್ರದ ಕಾರ್ಯಕ್ರಮಗಳ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವುದು, ಸ್ಥಳೀಯ ಪ್ರತಿಭೆಗಳಿಗೆ ಹಾಗೂ ಕಲಾವಿದರಿಗೆ ಹೆಚ್ಚಿನ ಅವಕಾಶ ಕಲ್ಪಿಸುವುದು, ಶ್ರೋತೃಗಳ ಅಗತ್ಯತೆ ಮತ್ತು ಆಸಕ್ತಿಗೆ ಅನುಗುಣವಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸುವುದು ಹಾಗೂ ಕೇಂದ್ರದ ಪ್ರಸಾರ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ನಂದನ್ ಕುಮಾರ್ ಎಲ್.ಓ. ತಿಳಿಸಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯ ಸ್ಥಳೀಯ ಸಂಸ್ಕೃತಿ, ಕಲೆ, ಸಾಹಿತ್ಯ, ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಆಕಾಶವಾಣಿಯನ್ನು ಇನ್ನಷ್ಟು ಜನಸ್ನೇಹಿಯಾಗಿಸುವ ಉದ್ದೇಶ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ..ನಂದನ್ ಕುಮಾರ್ ಎಲ್.ಓ. ಅವರ ಅಧಿಕಾರ ಸ್ವೀಕಾರಕ್ಕೆ ಆಕಾಶವಾಣಿ ಭದ್ರಾವತಿಯ ಸಿಬ್ಬಂದಿ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಶುಭ ಹಾರೈಸಿದ್ದಾರೆ.
Tags:
ಶಿವಮೊಗ್ಗ ಸುದ್ದಿ