ಶಿವಮೊಗ್ಗ ಶಾಸಕರನ್ನ ಹೊತ್ತು ಕುಣಿದ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ Shivamogga

ಶಿವಮೊಗ್ಗ ಶಾಸಕರನ್ನ ಹೊತ್ತು ಕುಣಿದ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ 

ಶಿವಮೊಗ್ಗ : ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶಿವಮೊಗ್ಗದ ಶಾಸಕ ಚನ್ನಬಸಪ್ಪ ಅವರನ್ನ ಹೊತ್ತು ಕುಡಿದಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ವರ್ಗಾವಣೆ ಮಾಡಿ ಶಿವಮೊಗ್ಗ ಜಿಲ್ಲಾ ವರಿಷ್ಠಾಧಿಕಾರಿ ಬಿ ನಿಖಿಲ್ ಆದೇಶಿಸಿದ್ದಾರೆ..

ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿತ್ತು..  ಈ ವೇಳೆ ಶಾಸಕರನ್ನ ಗಣಪತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಪೊಲೀಸರು ಹೊತ್ತು ಕುಣಿದಾಡಿದ್ದರು. ಇದು ಸಾಮಾಜಿಕ ಜಾಲತಾಣ ಸೇರಿದಂತೆ ಹಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು.. ಸಮವಸ್ತ್ರದಲ್ಲಿದ್ದಂತಹ ಪೊಲೀಸರು ಶಾಸಕರನ್ನ ಹೊತ್ತು ಕುಣಿದಾಡಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು..

ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯ ವರ್ತನೆ ಕುರಿತು ಕ್ರಮವನ್ನು ಜರುಗಿಸಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ..
Previous Post Next Post