ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್ ವರ್ಗಾವಣೆ - ನೂತನ ಸಿಇಒ ಆಗಿ ರಿಷಿ ಆನಂದ್ ನೇಮಕ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹುದ್ದೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.. ಸಿಇಒ ಹೇಮಂತ್ ವರ್ಗಾವಣೆ ಮಾಡಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ..ಅವರ ಸ್ಥಾನಕ್ಕೆ ರಿಷಿ ಆನಂದ್ ಅವರನ್ನು ನೇಮಿಸಲಾಗಿದೆ..
ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ನೂತನ ಸಿಇಒ ಆಗಿ ನೇಮಕಗೊಂಡಿರುವ ರಿಷಿ ಆನಂದ್ ಅವರು ಇದುವರೆಗೆ ವಿಜಯಪುರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ವಿಜಯಪುರ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯಿತಿ ಆಡಳಿತದ ಜವಾಬ್ದಾರಿ ನಿರ್ವಹಿಸುತ್ತಿದ್ದ ಅವರನ್ನು ಇದೀಗ ಶಿವಮೊಗ್ಗಕ್ಕೆ ವರ್ಗಾವಣೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಂತ್ ಎನ್. ಅವರನ್ನು ಹುಬ್ಬಳ್ಳಿಯ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ನ ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ವರ್ಗಾವಣೆ ಮಾಡಲಾಗಿದೆ.
Tags:
ಶಿವಮೊಗ್ಗ ಸುದ್ದಿ