ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ತೀರ್ಥಹಳ್ಳಿಯ ಟಿಪ್ಪರ್ ಕೊಪ್ಪ ಪೊಲೀಸರ ವಶಕ್ಕೆ - ಓರ್ವನ ಬಂಧನ..!
ತೀರ್ಥಹಳ್ಳಿ : ಯಾವುದೇ ಪರವಾನಿಗೆ ಬಳಸದೆ ಟಿಪ್ಪರ್ ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದ ಮೇರೆಗೆ ಟಿಪ್ಪರ್ ಸಮೇತ ಓರ್ವನನ್ನ ಕೊಪ್ಪ ಪೊಲೀಸರು ಬಂಧಿಸಿದ್ದಾರೆ.. ಅಕ್ರಮ ಮರಳು ಸಾಗಾಟಕ್ಕೆ ಬಳಸುತ್ತಿದ್ದ ಟಿಪ್ಪರ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ..
ತೀರ್ಥಹಳ್ಳಿ ತಾಲೂಕಿನ ದೇವಂಗಿ ಗ್ರಾಮದ ಓರ್ವನನ್ನ ಬಂಧಿಸಲಾಗಿದ್ದು ಯಾವುದೇ ಪರವಾನಿಗೆ ಇಲ್ಲದೆ ಟಿಪ್ಪರ್ ನಲ್ಲಿ ಮರಳು ಸಾಗಿಸುತ್ತಿದ್ದ ಆರೋಪ ಕೇಳಿ ಬಂದಿದೆ. ಆರೋಪಿ ಹಾಗೂ ಟಿಪ್ಪರ್ ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾನೂನು ಕ್ರಮವನ್ನು ಕೈಗೊಂಡಿದ್ದು ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ..
ಈ ಪ್ರಕರಣದಲ್ಲಿ ಇನ್ನಿಬ್ಬರು ಭಾಗಿಯಾಗಿದ್ದಾರೆ ಎಂಬುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದ್ದು ಇಬ್ಬರು ತೀರ್ಥಹಳ್ಳಿಯ ಕಾಂಗ್ರೆಸ್ ಪಕ್ಷದವರು ಎಂಬುದಾಗಿ ಹೇಳಲಾಗುತ್ತಿದೆ.. ಈ ಇಬ್ಬರಿಗಾಗಿ ಕೊಪ್ಪ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ..
ಕಾರ್ಯಾಚರಣೆಯಲ್ಲಿ ಪಿಎಸ್ಐ ಮಧು ಹಾಗೂ ಪೊಲೀಸ್ ಸಿಬ್ಬಂದಿಗಳಾದ ಲಕ್ಷ್ಮೀಶ್, ಯುವರಾಜ್ ಮತ್ತು ಪ್ರಕಾಶ್ ಭಾಗಿಯಾಗಿದ್ದರು..
Tags:
ತೀರ್ಥಹಳ್ಳಿ ಸುದ್ದಿ