ಸಹ್ಯಾದ್ರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ಕ್ರಿಕೆಟ್‌ನಲ್ಲಿ ಬೆಂಗಳೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ Sahyadri

ಸಹ್ಯಾದ್ರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ಕ್ರಿಕೆಟ್‌ನಲ್ಲಿ ಬೆಂಗಳೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

ತೀರ್ಥಹಳ್ಳಿ : ಅಕ್ಟೋಬ‌ರ್ 5 ರಂದು ಭದ್ರಾವತಿಯ ವಿ.ಐ.ಎಸ್.ಎಲ್ ಕ್ರೀಡಾಂಗಣದಲ್ಲಿ ನಡೆದ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕರ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮವಾಗಿ ತಮ್ಮ ಆಟವನ್ನು ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದು ಇದೇ ತಿಂಗಳ 9, 10 ಮತ್ತು 11 ನೇ ತಾರೀಖಿನಂದು ಭದ್ರಾವತಿಯ ಇದೇ ಕ್ರೀಡಾಂಗಣದಲ್ಲಿ ನಡೆಯಲಿರುವ ಬೆಂಗಳೂರು ವಿಭಾಗೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವುದರೊಂದಿಗೆ ತೀರ್ಥಹಳ್ಳಿ ತಾಲೂಕು ಹಾಗೂ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ವಿದ್ಯಾರ್ಥಿಗಳ ವಿವರ

ಸ್ಕಂದನ್ ಡಿ.ಗೌಡ. (10ನೇ ತರಗತಿ), ಸ್ವರೂಪ್ ಎಸ್.ಎಸ್. (10ನೇ ತರಗತಿ),  ರೋಹನ್ ಕೆ. (9ನೇ ತರಗತಿ), ಮಹಮ್ಮದ್ ಅರ್ಹಾನ್ (9ನೇ ತರಗತಿ), ಅಭಿನವ್ ವಿ ಪ್ರಭು (9ನೇ ತರಗತಿ).

ಈ ಕ್ರೀಡಾ ಸಾಧಕ ಪ್ರತಿಭೆಗಳನ್ನೂ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಜಗದೀಶ್ ಎಂ.ಎಸ್ ಇವರನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಶಿಕ್ಷಕವೃಂದದವರು ಮತ್ತು ಪೋಷಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ..
Previous Post Next Post