ಸಹ್ಯಾದ್ರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಅಕ್ಷಯ್ ರಾಜ್ಯ ಮಟ್ಟಕ್ಕೆ ಆಯ್ಕೆ Sahyadri

ಸಹ್ಯಾದ್ರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ
ಅಕ್ಷಯ್ ರಾಜ್ಯ ಮಟ್ಟಕ್ಕೆ ಆಯ್ಕೆ

ತೀರ್ಥಹಳ್ಳಿ : ಅಕ್ಟೋಬರ್ 13 ಮತ್ತು 14ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ 17 ವರ್ಷದ ವಯೋಮಿತಿ ಒಳಗಿನ ಪ್ರೌಢಶಾಲಾ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಹ್ಯಾದ್ರಿ ಸಂಸ್ಥೆಯ ವಿದ್ಯಾರ್ಥಿ ಅಕ್ಷಯ್ ಕೆ ಪಿ  ಡಿಸ್ಕಸ್ ತ್ರೋನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ತೀರ್ಥಹಳ್ಳಿ ತಾಲೂಕಿಗೆ, ಶಿಕ್ಷಣ ಸಂಸ್ಥೆಗೆ ಕೀರ್ತಿಯನ್ನು ತಂದಿದ್ದಾನೆ.

ಈ ಉದ್ಯೋನ್ಮುಖ  ಕ್ರೀಡಾ ಪ್ರತಿಭೆಯನ್ನು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಜಗದೀಶ್ ಎಂ ಎಸ್ ರವರನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ,  ಆಡಳಿತ ಅಧಿಕಾರಿಗಳು, ಪ್ರಾಂಶುಪಾಲರು, ಮತ್ತು  ಶಿಕ್ಷಕವೃಂದದವರು  ಅಭಿನಂದಿಸಿ ಶುಭ ಹಾರೈಸಿರುತ್ತಾರೆ..
Previous Post Next Post