ವಿಜ್ಞಾನ ವಿಚಾರಗೋಷ್ಠಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಾಗ್ದೇವಿ ಶಾಲೆಯ ವಿದ್ಯಾರ್ಥಿನಿ ಆನಂದಿತಾ . ಕೆ.‌ಎಲ್ Vagdevi

ವಿಜ್ಞಾನ ವಿಚಾರಗೋಷ್ಠಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಾಗ್ದೇವಿ ಶಾಲೆಯ ವಿದ್ಯಾರ್ಥಿನಿ ಆನಂದಿತಾ . ಕೆ.‌ಎಲ್

ತೀರ್ಥಹಳ್ಳಿ : ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನಗೋಷ್ಠಿಯಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಶಾಲೆಯ 9ನೇ ಯ ತರಗತಿಯ ಪ್ರತಿಭಾವಂತೆ ವಿದ್ಯಾರ್ಥಿನಿ ಆನಂದಿತಾ.‌ಕೆ. ಎಲ್. 
ವಿಜ್ಞಾನಗೋಷ್ಠಿಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. 

ಹೆದ್ದೂರಿನ  ಅರ್ಚನಾ ಹಾಗೂ ಡಿ ವಿ ಲಕ್ಷ್ಮೀಶ ದಂಪತಿಗಳ ಪುತ್ರಿಯಾದ ಇವಳು  ತನ್ನ ಸ್ವಯಂ ಪ್ರತಿಭೆಯಿಂದಲೇ ಅತ್ಯಂತ ಕಡಿಮೆ ಅವಧಿಯಲ್ಲಿ ಸೂಕ್ತ ಮಾರ್ಗದರ್ಶನ ಪಡೆದು ಸ್ಪರ್ಧೆಯಲ್ಲಿ ಭಾಗವಹಿಸಿ , ಪ್ರಶಸ್ತಿ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾಳೆ. ವಾಗ್ದೇವಿ ಶಾಲೆಯ ಈ ವರ್ಷದ ವಿದ್ಯಾರ್ಥಿ ಸಂಸತ್ ಚುನಾವಣೆಯಲ್ಲಿ ಎಲ್ಲರ ಮನಗೆದ್ದು ಅತ್ಯಂತ ಹೆಚ್ಚಿನ ಮತಗಳನ್ನು ಪಡೆದು ವಿದ್ಯಾರ್ಥಿ ನಾಯಕಿಯಾಗಿ ಅಯ್ಕೆಯಾಗಿ ಎಲ್ಲರ ಮೆಚ್ಚಿನ ವಿದ್ಯಾರ್ಥಿನಿಯಾಗಿದ್ದಾಳೆ. ತನಗೆ ಒಲಿದು ಬಂದಿರುವ ಈ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುತ್ತಾ ಎಲ್ಲಾ ವಿದ್ಯಾರ್ಥಿಗಳ ಧ್ವನಿಯಾಗಿ ಸಮರ್ಥ ನಾಯಕತ್ವಕ್ಕೆ ಮಾದರಿಯಾಗಿದ್ದಾಳೆ. ಶಾಲೆಯ ಅನೇಕ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಅತ್ಯಂತ ಸಮರ್ಥವಾಗಿ ನಿಭಾಯಿಸುತ್ತಿದ್ದಾಳೆ. 

ಶಿಕ್ಷಕರ ಜೊತೆ ವಿನಯತೆ ವಿಧೇಯತೆ ಮುಂತಾದ ಸದ್ಗುಣಗಳನ್ನು ಮೈಗೂಡಿಸಿಕೊಂಡು ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿರುತ್ತಾಳೆ. ಅಂತೆಯೇ ತನ್ನ ಆಸಕ್ತಿಯ ವಿಷಯವಾದ ವಿಜ್ಞಾನ ವಿಷಯದ ವಿಚಾರ ಗೋಷ್ಠಿಯಲ್ಲಿ ಶಾಲಾಹಂತದಲ್ಲಿ ಅಯ್ಕೆಯಾಗಿ, ತಾಲ್ಲೂಕು ಹಂತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಹಂತಕ್ಕೆ ಆಯ್ಕೆಯಾಗಿ, ಜಿಲ್ಲಾ ಹಂತದಲ್ಲೂ ಅದ್ಭುತ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು  ಶಾಲೆಗೆ ಹಾಗೂ ತಾಲ್ಲೂಕಿಗೆ ಹೆಮ್ಮೆ ತರುವ ವಿಷಯವಾಗಿದೆ. 

ರಾಜ್ಯಮಟ್ಟದಲ್ಲು ಅತ್ಯುತ್ತಮ ಪ್ರದರ್ಶನ ನೀಡಿ ಪೋಷಕರ,  ಶಾಲೆಯ ಹಾಗೂ ಊರಿನ ಕೀರ್ತಿ ಬೆಳಗಲೆಂದು ವಾಗ್ದೇವಿ ಸಂಸ್ಥೆಯ ಅಧ್ಯಕ್ಷರು, ಶಿಕ್ಷಕರು ಶುಭ ಹಾರೈಸಿದ್ದಾರೆ..
Previous Post Next Post